ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಲ್ಕೇ ದಿನದಲ್ಲಿ KRS ಜಲಾಶಯದಲ್ಲಿ 11 ಅಡಿ ನೀರು ಹೆಚ್ಚಳವಾಗಿದೆ. ಈ ಮೂಲಕ ಮೇ ತಿಂಗಳಲ್ಲೇ 100 ಅಡಿ ಭರ್ತಿಯಾದಂತಾಗಿದೆ.
ಕೆಆರ್‌ಎಸ್ ಅಣೆಕಟ್ಟೆಗೆ ಉತ್ತಮ ಒಳಹರಿವು ಇದ್ದು, ಇದೇ ರೀತಿ ಮಳೆ ಮುಂದುವರಿದರೆ ಜೂನ್ ಎರಡನೇ ವಾರದಲ್ಲಿ ಡ್ಯಾಂ ಭರ್ತಿಯಾಗುವ ಸಾಧ್ಯತೆಯಿದೆ. ಮುಂಗಾರು ಆರಂಭದಲ್ಲಿಯೇ ಉತ್ತಮ ಮಳೆಯಾಗುತ್ತಿರುವುದು ರೈತರ ಮುಖದಲ್ಲಿ ಮಂದಹಾಸ ತಂದಿದೆ.
124.80 ಅಡಿ ಗರಿಷ್ಠ ಮಟ್ಟ ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆಆರ್‌ಎಸ್‌ನಲ್ಲಿ 100.10 ಅಡಿ ನೀರಿದೆ. 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 22.222 ಟಿಎಂಸಿ ನೀರು ಸಂಗ್ರಹವಾಗಿದೆ.