ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ನೀರಿನ ವಿಚಾರದಲ್ಲಿ ಎಂದೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಹೇಳಿದ್ದಾರೆ.
ಸಿಂಧೂ ನದಿ ನೀರು ವಿಚಾರದಲ್ಲಿ ಭಾರತದ ನಿರ್ಧಾರವನ್ನು ಉಲ್ಲೇಖಿಸಿದ ಮುನೀರ್, ಪಾಕಿಸ್ತಾನದ ಜನರಿಗೆ ಈ ನೀರಿನ ಹಕ್ಕಿದೆ . ಇಂತಹ ಪರಿಸ್ಥಿತಿಯಲ್ಲಿ, 24 ಕೋಟಿ ಪಾಕಿಸ್ತಾನಿಗಳ ಈ ಮೂಲಭೂತ ಹಕ್ಕಿನ ಮೇಲೆ ಪಾಕಿಸ್ತಾನ ಸೇನೆ ಯಾವುದೇ ರಾಜಿ ಮಾಡಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಬಲೂಚಿಸ್ತಾನದಲ್ಲಿ ಕೂಡ ಭಾರತ ಹಿಂಸಾಚಾರವನ್ನು ಪ್ರಚೋದಿಸುತ್ತಿದೆ: ಬಲೂಚಿಸ್ತಾನದಲ್ಲಿ ತನ್ನ ವಿರುದ್ಧ ಹೋರಾಡುತ್ತಿರುವ ಗುಂಪುಗಳಿಗೆ ಭಾರತದಿಂದ ಬೆಂಬಲ ಸಿಗುತ್ತಿದೆ ಎಂದು ಮುನೀರ್ ತಮ್ಮ ಭಾಷಣದಲ್ಲಿ ಹೇಳಿಕೊಂಡಿದ್ದಾರೆ.