ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತಿವೃಷ್ಟಿಯಿಂದ ಮನೆಗಳಿಗೆ ಹಾನಿ ಉಂಟಾದರೆ ಈಗಾಗಲೇ ಪರಿಹಾರ ಒದಗಿಸುವ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ತಕ್ಷಣ ಪರಿಹಾರ ಒದಗಿಸುವ ಕಾರ್ಯ ನಡೆಯಬೇಕುಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಶುಕ್ರವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 125 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ರಾಜ್ಯದಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ರಾಜ್ಯದ 28 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜಿಲ್ಲೆಗಳಲ್ಲಿ ಎಸ್‌ಡಿಆರ್‌ಎಫ್ ಅಡಿ ಒಟ್ಟಾರೆಯಾಗಿ ಒಂದು ಸಾವಿರ ಕೋಟಿಗಿಂತಲೂ ಹೆಚ್ಚು ಹಣ ಲಭ್ಯವಿದೆ. ಭೂಕುಸಿತದಂತಹ ಪ್ರಕರಣಗಳಲ್ಲಿ ಸಾವಿನ ಸಂಭಾವ್ಯತೆಯನ್ನು ತಪ್ಪಿಸಲು, ಜನರ ತೆರವು ಕಾರ್ಯ ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.ಮಳೆ ಹಾನಿ ಪ್ರದೇಶಗಳಿಗೆ ಡಿಸಿ, ಸಿಇಒ ತಕ್ಷಣ ಕಡ್ಡಾಯವಾಗಿ ಭೇಟಿ ನೀಡಿ ಅಗತ್ಯ ಪರಿಹಾರ ಒದಗಿಸಬೇಕು. ಸಂಪೂರ್ಣ ಮನೆ ಹಾನಿ ಪ್ರಕರಣಗಳಲ್ಲಿ 1.20 ಲಕ್ಷ ರೂ. ಮನೆ ಹಾನಿ ತಕ್ಷಣ ಪರಿಹಾರ ಒದಗಿಸಲಾಗುತ್ತಿದೆ. ಅಂತಹವರಿಗೆ ಹೊಸ ಮನೆ ಒದಗಿಸಲು ಕಳೆದ ವರ್ಷದಂತೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ವಿವಿಧ ಯೋಜನೆಗಳಡಿ ಮನೆಗಳ ನಿರ್ಮಾಣಕ್ಕೆ ನೆರವು ಒದಗಿಸಬೇಕು ಎಂದು ಸೂಚಿಸಿದರು.