ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ವಾಡಿಕೆಗಿಂತ ಮೊದಲೇ ಮುಂಗಾರು ಆರಂಭವಾಗಿದ್ದು, ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮಳೆ ಸುರಿಯುತ್ತಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಹೆಚ್ಚು ಹಾನಿಯಾಗಿದೆ. ಇನ್ನೂ ಮಳೆಯ ಅಬ್ಬರ ಮುಂದುವರಿಯಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.