ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಕೇಸ್ ಏರಿಕೆ ಆಗುತ್ತಿದೆ. ಆಕ್ಟೀವ್ ಪ್ರಕರಣಗಳ ಸಂಖ್ಯೆ ಬರೋಬ್ಬರಿ 150ರ ಗಡಿ ದಾಟಿದೆ. ಕೊರೊನಾ ಭೀತಿ, ಡೆಂಗ್ಯೂ ಕಾಟದ ಮಧ್ಯೆ ಮತ್ತೆ ಮಹಾದೇವಪುರ, ಪೂರ್ವ ವಲಯದಲ್ಲಿ ಕೋವಿಡ್ ಏರಿಕೆ ಆಗುತ್ತಿದೆ.
ರಾಜ್ಯದಲ್ಲಿ ಕೋವಿಡ್ ಕೇಸ್ ಗಣನೀಯವಾಗಿ ಏರಿಕೆ ಕಂಡಿದೆ. ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್ಗಳು ದಾಖಲಾಗಿದೆ. ಬೆಂಗಳೂರು ಮತ್ತೆ ಕೊರೊನಾ ಹಾಟ್ಸ್ಪಾಟ್ ಆಗುತ್ತಿದೆ.
ಐಎಲ್ ಮತ್ತು ಸಾರಿ ಕೇಸ್ಗಳಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಲು ಸರ್ಕಾರ ಸೂಚಿಸಿದೆ. ಇನ್ನು ಬೆಂಗಳೂರಿನಲ್ಲಿ ಕೇಸ್ ಏರಿಕೆ ಆಗುತ್ತಿದ್ದು, ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಮಳೆಗಾಲ ಆಗಿರುವುದರಿಂದ ಬಿಬಿಎಂಪಿ ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ.