ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟದಲ್ಲಿ ಇಂದು (ಮೇ 31) ಬೆಳ್ಳಂ ಬೆಳಗ್ಗೆ ಹಲವು ಕಡೆ ಲೋಕಾಯುಕ್ತ , ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಕಲಬುರಗಿ, ಧಾರವಾಡ, ಬಾಗಲಕೋಟೆ, ಗದಗದ ಹುನಗುಂದ, ಹಾವೇರಿ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ಮಾಡಿದದು, ಆಸ್ತಿ-ಪಾಸ್ತಿ ಬಗ್ಗೆ ದಾಖಲೆ ಪರಿಶೀಲಿಸಿಸುತ್ತಿದ್ದಾರೆ.
ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ್ ಶಿರೋಳ ಮನೆ, ಕಚೇರಿ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗಂಗಾಧರ್ ಮನೆ, ಕಚೇರಿ, ಅಳಿಯ, ಭಾವನ ಮನೆ ಸೇರಿ 6 ಕಡೆ ಲೋಕಾಯುಕ್ತ ಎಸ್ ಪಿ ಹಣಮಂತರಾಯ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ದಾಖಗಳ ಶೋಧ ನಡೆದಿದೆ. ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ, ಹಾವೇರಿ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು. ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.