ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸದ್ದಿಲ್ಲದೇ ಕೊರೋನಾ ಕೇಸ್‌ಗಳು ಹೆಚ್ಚಾಗುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಕೋವಿಡ್ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು. ಹಾಗೇ ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ.
ಮಾರ್ಗಸೂಚಿಯಲ್ಲಿ ಏನಿದೆ?
ಮಕ್ಕಳಿಗೆ ನೆಗಡಿ, ಜ್ವರ, ಕೆಮ್ಮು ಇದ್ರೆ ಶಾಲೆಗೆ ಕಳುಹಿಸದೇ ವೈದ್ಯರ ಸಲಹೆ ಪಡೆದುಕೊಂಡು ಸೂಕ್ತ ಚಿಕಿತ್ಸೆ, ಆರೈಕೆ ನೀಡಬೇಕು
ಜ್ವರ ಸಂಪೂರ್ಣ ಗುಣಮುಖವಾದ ಬಳಿಕ ಮಕ್ಕಳನ್ನ ಶಾಲೆಗೆ ಕಳಿಸಬೇಕು
ಶಾಲೆಗೆ ಬಂದ ನಂತ್ರ ಮಕ್ಕಳಲ್ಲಿ ಜ್ವರ ಶೀತ ಗುಣಲಕ್ಷಣಗಳು ಕಂಡುಬಂದ್ರೇ ತಕ್ಷಣ ಪೋಷಕರ ಗಮನಕ್ಕೆ ತಂದು ಮನೆಗೆ ಕಳುಹಿಸಬೇಕು
ಶಾಲಾ ಶಿಕ್ಷಕರಿಗೆ ಸಿಬ್ಬಂದಿಗೆ ಜ್ವರ, ಶೀತದಂತಹ ಲಕ್ಷಣ ಕಂಡುಬಂದ್ರೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.
ಸ್ಯಾನಿಟೈಸ್ ಬಳಕೆ, ಕೈಗಳ ಸ್ವಚ್ಛತೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳೋದು ಸೇರಿದಂತೆ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನ ಶಾಲೆಯಲ್ಲಿ ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.