SSLCಯಲ್ಲಿ‌ ಶೇ. 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ ಡಿಡಿಪಿಐಗಳಿಗೆ ನೊಟೀಸ್ ನೀಡಿ: ಸಿಎಂ ಸಿದ್ದರಾಮಯ್ಯ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ವರ್ಷದ ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಕಳೆದ ವರ್ಷಕ್ಕಿಂತ ಫಲಿತಾಂಶ ಕಡಿಮೆ ಬಂದಿದ್ದು, ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ , ಎಸ್​ಎಸ್​ಎಲ್​​ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ.

ಈ ವೇಳೆ ಶೇ. 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೊಟೀಸ್ ನೀಡುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ಗೆ ಸೂಚನೆ ನೀಡಿದ್ದಾರೆ.

ಡಿಸಿ ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದು, ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೊಟೀಸ್ ನೀಡಬೇಕು. ನೋಟಿಸ್​ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ​ಗೆ ಸೂಚಿಸಿದ್ದಾರೆ.

ಶಿಕ್ಷಕರು ಮತ್ತು ಡಿಡಿಪಿಐಗಳು ಆಸಕ್ತಿಯಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ. ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಉತ್ತಮ ಫಲಿತಾಂಶ ಬರುತ್ತಿದೆ. ಡಿಡಿಪಿಐಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಡಿಸಿಪಿಐಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.

ಡ್ರಾಪ್‌ಔಟ್‌ ತಡೆಯಲು ಏನೆಲ್ಲಾ ಸಾಧ್ಯವೋ ಎಲ್ಲವನ್ನೂ ಮಾಡಬೇಕು. ಡಿಡಿಪಿಐಗಳು ಹಾಗೂ ಬಿಇಒಗಳು ಶಾಲೆಗಳಿಗೆ ಭೇಟಿ ನೀಡುತ್ತಿದ್ದಾರಾ? ಈ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗಮನಿಸಬೇಕು. ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆ ಆಗುತ್ತಿರುವು ಕೆಟ್ಟ ಬೆಳವಣಿಗೆ. ಸರ್ಕಾರ ಮೊಟ್ಟೆ, ಹಾಲು, ರಾಗಿಮಾಲ್ಟ್‌, ಸೋಪು, ಹಾಸ್ಟೆಲ್‌ ಸೌಲಭ್ಯ ಕೊಟ್ಟರೂ ದಾಖಲಾತಿ ಪ್ರಮಾಣ ಏಕೆ ಕಡಿಮೆ ಆಗುತ್ತಿದೆ? ಈ ಬಗ್ಗೆ ಮಾಹಿತಿ ಪಡೆದು ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಿ. ಮುಂದಿನ ಶೈಕ್ಷಣಿಕ ಸಾಲಿನ ಹೊತ್ತಿಗೆ ಪರಿಸ್ಥಿತಿ ಉತ್ತಮಗೊಳ್ಳಬೇಕು. ನೆಪಗಳು ಮುಖ್ಯ ಅಲ್ಲ, ಫಲಿತಾಂಶ ತರುವುದು ಮುಖ್ಯ. ಪ್ರಾಮಾಣಿಕ ಪ್ರಯತ್ನ ಇದ್ದರೆ ಪ್ರಾಮಾಣಿಕ ಫಲಿತಾಂಶ ಬರುತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!