ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಮಲ್ ಹಾಸನ್ ಕನ್ನಡದ ಬಗ್ಗೆ ಮಾಡಿದ ವಿವಾದದ ಬಳಿಕ ಅವರು ಮೊದಲ ಬಾರಿಗೆ ನಟ ಶಿವರಾಜ್ ಕುಮಾರ್ ಮಾತನಾಡಿದ್ದಾರೆ.
ಕನ್ನಡ ಭಾಷೆಗೆ ಅವಮಾನಿಸಿ ಕನ್ನಡಿಗರನ್ನು ಕೆರಳಿಸಿದ ಕಮಲ್ ಹಾಸನ್ ಹೇಳಿಕೆಯನ್ನು ನಾನು ಸಮರ್ಥನೆ ಮಾಡಿಕೊಳ್ಳಲ್ಲ. ಆ ಸಂದರ್ಭದಲ್ಲಿ ಏನು ಮಾತಾಡ್ತಿದ್ದಾರೆ ಅನ್ನೋದು ಗೊತ್ತಾಗಲಿಲ್ಲ. ಅಣ್ಣಾವ್ರ ಕನ್ನಡ ಅಭಿಮಾನ ನಿಮಗೆಲ್ಲರಿಗೂ ಗೊತ್ತೇ ಇದೆ ಎಂದು ನಟ ಶಿವರಾಜ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಣ್ಣ, ನಾನೇನು ಕಮಲ್ ಹಾಸನ್ ಅವರನ್ನ ಸಮರ್ಥನೆ ಮಾಡಿಕೊಳ್ಳಲ್ಲ. ಭಾಷೆ ಬಗ್ಗೆ ಮಾತಾಡ್ತಿದ್ದಾರೆ ಅಂದಾಗ ನಾನು ಕೈ ತಟ್ಟಿದ್ದು ನಿಜ. ಆದರೆ ಆ ಸಂದರ್ಭ ಏನು ಮಾತಾಡ್ತಿದ್ದಾರೆ ಅಂತಾ ಗೊತ್ತಾಗಲಿಲ್ಲ ಎಂದಿದ್ದಾರೆ.
ಕನ್ನಡ ಅಭಿಮಾನ ಏನು ಅನ್ನೋದು ನಮಗೂ ಗೊತ್ತಿದೆ. ನಾನು ಕೂಡ ಕನ್ನಡದ ಅಭಿಮಾನಿ. ಅಣ್ಣಾವ್ರ ಕನ್ನಡ ಅಭಿಮಾನ ನಿಮಗೆಲ್ಲರಿಗೂ ಗೊತ್ತೇ ಇದೆ. ಸ್ಟೇಜ್‌ನಲ್ಲಿ ನೀವು ಯಾಕೆ ಪ್ರಶ್ನೆ ಮಾಡಲಿಲ್ಲ ಅಂದಾಗ ನನಗೆ ಅವರು ಮಾತಾಡಿದ್ದು ಸ್ಪಷ್ಟವಾಗಿ ಕೇಳಲಿಲ್ಲ. ನಾನು ಎರಡನೇ ಬಾರಿ ಕ್ಲಿಪ್ಪಿಂಗ್ ಕೇಳಿದಾಗಲೇ ಗೊತ್ತಾಗಿದ್ದು. ಆ ಕಾರ್ಯಕ್ರಮದಲ್ಲಿ ಅವರ ಮಾತು ನನಗೆ ಸ್ಪಷ್ಟವಾಗಿ ಕೇಳಿಸಲಿಲ್ಲ. ಕಲಾವಿದನಾಗಿ ಭಾಷೆ ಬಗ್ಗೆ ಮಾತಾನಾಡುತ್ತಿದ್ದಾರೆಂದು ಚಪ್ಪಾಳೆ ತಟ್ಟಿದೆ. ಕಮಲ್ ಹಾಸನ್ ಮಾತಾಡಿದ್ದನ್ನ ನಾನು ಸಮರ್ಥನೆ ಮಾಡಿಕೊಳ್ಳಲ್ಲ. ಆ ಬಗ್ಗೆ ಅವರನ್ನೇ ಪ್ರಶ್ನೆ ಮಾಡಿ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದ್ದಾರೆ.