ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಇಂದು ಕ್ವಾಲಿಫೈಯರ್-2 ಫೈಟ್ ನಡೆಯಲಿದೆ. ಗೆದ್ದ ತಂಡ ಜೂನ್ 3ರಂದು ಆರ್ಸಿಬಿ ವಿರುದ್ಧ ಟ್ರೋಫಿಗಾಗಿ ಫೈನಲ್ ಹಣಾಹಣಿ ನಡೆಸಲಿದೆ.
ಇಂದು ಅಹಮದಾಬಾದ್ನಲ್ಲಿ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ರಾತ್ರಿ 7:30ಕ್ಕೆ ಪಂದ್ಯ ಶುರುವಾಗಲಿದೆ.
ಪಂಜಾಬ್ ಹಾಗೂ ಮುಂಬೈ ಒಟ್ಟಾರೆ ಐಪಿಎಲ್ನಲ್ಲಿ 33 ಬಾರಿ ಮುಖಾಮುಖಿ ಆಗಿವೆ. ಈ ವೇಳೆ ಮುಂಬೈ 17 ಪಂದ್ಯಗಳನ್ನು ಗೆದ್ದಿದೆ. ಪಂಜಾಬ್ 16 ಬಾರಿ ಗೆಲುವು ಸಾಧಿಸಿದೆ. ಆದ್ರೆ 11 ವರ್ಷಗಳ ಬಳಿಕ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಪ್ಲೇ ಆಫ್ ಪ್ರವೇಶಿಸಿದೆ.
ಆರಂಭಿಕ 5 ಪಂದ್ಯಗಳಲ್ಲಿ ಸೋಲು ಕಂಡಿದ್ದ ಮುಂಬೈ ಇಂಡಿಯನ್ಸ್ ನಿರೀಕ್ಷೆಗೂ ಮೀರಿದ ಪ್ರದರ್ಶನದೊಂದಿಗೆ ಪ್ಲೇ ಆಫ್ಗೆ ಎಂಟ್ರಿ ಕೊಟ್ಟಿದ್ದು ಕ್ವಾಲಿಫೈಯರ್-2ಗೆ ಲಗ್ಗೆಯಿಟ್ಟಿದೆ.