ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾದ ಹಿನ್ನೆಲೆ, ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ.
ಕೆಆರ್‌ಎಸ್ ಡ್ಯಾಂ 124.80 ಅಡಿ ಗರಿಷ್ಠ ಮಟ್ಟವನ್ನು ಹೊಂದಿದ್ದು, ಶನಿವಾರ 102.00 ಅಡಿ ಇದ್ದ ಡ್ಯಾಂನ ನೀರಿನ ಮಟ್ಟವು ಇಂದು 103.70 ಅಡಿಗೆ ಏರಿಕೆಯಾಗಿದೆ. ಇಂದು ಡ್ಯಾಂಗೆ 17,544 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಡ್ಯಾಂನಿಂದ 735 ಕ್ಯೂಸೆಕ್ ನೀರಿನ ಹೊರಹರಿವಿದೆ. 49.452 ಟಿಎಂಸಿ ಸಾಮರ್ಥ್ಯವಿರುವ ಡ್ಯಾಂನಲ್ಲಿ 25.851 ಟಿಎಂಸಿ ನೀರು ಸಂಗ್ರಹವಾಗಿದೆ.