ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಜಾದ ನೆರವು ಕೇಂದ್ರದ ಬಳಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 30 ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ರಫಾದಲ್ಲಿ ಗಾಜಾ ಹ್ಯುಮಾನಿಟೇರಿಯನ್ ಫೌಂಡೇಶನ್ ನಡೆಸುತ್ತಿದ್ದ ನೆರವು ವಿತರಣಾ ಕೇಂದ್ರದ ಬಳಿ ಇಸ್ರೇಲಿ ದಾಳಿ ನಡೆಸಿದೆ ಎಂದು ಹಮಾಸ್ ಮಾಧ್ಯಮ ಡಬ್ಲ್ಯೂಎಎಫ್ಎ ಭಾನುವಾರ ವರದಿ ಮಾಡಿದೆ. ಆದರೆ ಈ ಬಗ್ಗೆ ಇಸ್ರೇಲ್ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಯುದ್ಧಪೀಡಿತ ಪ್ರದೇಶವಾದ ರಫಾದಲ್ಲಿ ಗಾಜಾ ಹ್ಯುಮಾನಿಟೇರಿಯನ್ ಫೌಂಡೇಶನ್ (GHF) ನೆರವು ವಿತರಣೆ ಕಾರ್ಯವನ್ನು ನಡೆಸುತ್ತಿತ್ತು. ಈ ಸ್ಥಳದ ಬಳಿ ಇಸ್ರೇಲ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದು, 115 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹಮಾಸ್ ಸಂಬಂಧಿತ ಮಾಧ್ಯಮ ಡಬ್ಲ್ಯೂಎಎಫ್ಎ ಭಾನುವಾರ ವರದಿ ಮಾಡಿದೆ.