2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಮುಂಬೈ- ಪಂಜಾಬ್ ರೆಡಿ: ಟಾಸ್ ಗೆದ್ದ ಅಯ್ಯರ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ರೆಡಿಯಾಗಿದ್ದು, ಟಾಸ್​ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ವಿಶ್ವದ ಅತಿದೊಡ್ಡ ಕ್ರೀಡಾಂಗಣವಾಗಿರುವ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಜೂನ್ 3ರಂದು ಆರ್​ಸಿಬಿ (RCB ವಿರುದ್ಧ ಇದೇ ಮೈದಾನದಲ್ಲಿ ಫೈನಲ್ ಆಡಲಿದೆ.

ಕ್ವಾಲಿಫೈಯರ್ 1ರಲ್ಲಿ ಆರ್​ಸಿಬಿ ವಿರುದ್ಧ ಹೀನಾಯ ಸೋಲು ಕಂಡಿದ್ದ ಪಂಜಾಬ್ ತಂಡ ಇಂದು ತಮ್ಮ ತಪ್ಪನ್ನು ತಿದ್ದುಕೊಂಡು ಮುಂಬೈ ವಿರುದ್ದ ಗೆಲುವು ಸಾಧಿಸಲು ಎದುರು ನೋಡುತ್ತಿದೆ. ಅತ್ತ ಎಲಿಮಿನೇಟರ್​​ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಗೆಲುವು ಸಾಧಿಸಿರುವ ವಿಶ್ವಾಸದಲ್ಲಿರುವ ಮುಂಬೈ ಮತ್ತೊಂದು ಪಂದ್ಯ ಗೆದ್ದು 7ನೇ ಬಾರಿ ಫೈನಲ್ ಪ್ರವೇಶಿಸುವ ಹಾದಿಯಲ್ಲಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!