ಸಂಸದೆ ಜೊತೆ ರಿಂಕು ಸಿಂಗ್‌ ಎಂಗೇಜ್‌: ಲಕ್ನೋದಲ್ಲಿ ನಡೆಯಲಿದೆಯಾ ಅದ್ದೂರಿ ನಿಶ್ಚಿತಾರ್ಥ?

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್‌ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳಲು ರೆಡಿಯಾಗಿದ್ದಾರೆ.

ಜೂನ್ 8 ರಂದು ಲಕ್ನೋದ ಹೋಟೆಲ್‌ನಲ್ಲಿ ರಿಂಕು ಮತ್ತು ಸಂಸದೆ ಪ್ರಿಯಾ ನಿಶ್ಚಿತಾರ್ಥ ಆಗಲಿದ್ದಾರೆ ಎಂದು ತಿಳಿದುಬಂದಿದೆ.

ಕೆಲವು ತಿಂಗಳ ಹಿಂದೆ ಪ್ರಿಯಾಳ ತಂದೆ ತುಫಾನಿ ಸರೋಜ್ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಸಮಾಜವಾದಿ ಪಕ್ಷದ ಹಾಲಿ ಶಾಸಕರೂ ಆಗಿರುವ ತುಫಾನಿ, ರಿಂಕು ಸಿಂಗ್ ಮತ್ತು ಪ್ರಿಯಾ ಸರೋಜ್ ಇಬ್ಬರೂ ಮದುವೆಯಾಗಲು ನಮ್ಮ ಅನುಮತಿ ಕೋರಿದರು. ನಿಶ್ಚಿತಾರ್ಥ ಇನ್ನೂ ನಡೆದಿಲ್ಲ. ಆರಂಭಿಕ ಮಾತುಕತೆಗಳು ಮಾತ್ರ ನಡೆದಿವೆ ಎಂದು ತಿಳಿಸಿದ್ದಾರೆ.

Rinku Singh to get engaged with Samajwadi Party MP Priya Saroj on June 8 -  India Todayಭಾರತದ ಟಿ20ಐ ತಂಡದ ಪ್ರಮುಖ ಆಟಗಾರನಾಗಿ ರಿಂಕು ಹೊರಹೊಮ್ಮಿದ್ದಾರೆ. 30 ಟಿ20ಐ ಪಂದ್ಯಗಳು ಮತ್ತು 22 ಇನ್ನಿಂಗ್ಸ್‌ಗಳಲ್ಲಿ ರಿಂಕು 507 ರನ್ ಗಳಿಸಿದ್ದಾರೆ. ಇದರಲ್ಲಿ ಮೂರು ಅರ್ಧಶತಕಗಳಿವೆ. ಅವರು ಇನ್ನೂ ತಮ್ಮ ಚೊಚ್ಚಲ ಟಿ20ಐ ಶತಕವನ್ನು ಬಾರಿಸಿಲ್ಲ. 27 ವರ್ಷದ ಅವರು 2023 ರಲ್ಲಿ ಐರ್ಲೆಂಡ್ ವಿರುದ್ಧ ಟಿ20ಐಗೆ ಪಾದಾರ್ಪಣೆ ಮಾಡಿದರು. ರಿಂಕು ಭಾರತ ಪರ ಎರಡು ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. ಲಿಸ್ಟ್-ಎ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. 52 ಇನ್ನಿಂಗ್ಸ್‌ಗಳಲ್ಲಿ 1,899 ರನ್ ಗಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!