ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಕೆಟ್ ಲೋಕಕ್ಕೆ ಒಂದೇ ದಿನ ಎರಡೆರಡು ಆಘಾತ ಎದುರಾಗಿದೆ. ಆಸ್ಟ್ರೇಲಿಯಾದ ಸ್ಫೋಟಕ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿ ಎಲ್ಲರಿಗೂ ಶಾಕ್ ನೀಡಿದ್ದರು. ಇದೀಗ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ ಹೆನ್ರಿಕ್ ಕ್ಲಾಸೆನ್ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ.
ವಿಶ್ವ ಕ್ರಿಕೆಟ್ನಲ್ಲಿ ಸಾಕಷ್ಟು ಹೆಸರು ಮಾಡಿದ್ದ ಕ್ಲಾಸೆನ್ ಕೇವಲ 33ನೇ ವಯಸ್ಸಿಗೆ ಈ ನಿರ್ಧಾರ ತೆಗೆದುಕೊಂಡಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
ಕ್ಲಾಸೆನ್ಗೆ ಟಿ20 ಕ್ರಿಕೆಟ್ನಲ್ಲಿ ಭಾರಿ ಬೇಡಿಕೆ ಇದೆ. ಹೀಗಾಗಿಯೇ ಅವರು ವಿಶ್ವದ ಇತರ ಟಿ20 ಲೀಗ್ಗಳಲ್ಲೂ ಆಡುತ್ತಿದ್ದಾರೆ. ಹೀಗಿರುವಾಗ ಇದ್ದಕ್ಕಿದ್ದಂತೆ ಅಂತರರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವುದು ಅಚ್ಚರಿ ಮೂಡಿಸಿದೆ.