ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಆಕಸ್ಮಿಕ ಬೆಂಕಿ ತಗುಲಿ ಪವರ್ ಹೌಸ್ ಘಟಕವು ಹೊತ್ತಿ ಉರಿದಿರುವ ಘಟನೆ ತೋರಣಗಲ್ ಬಳಿ ಇರುವ ಜಿಂದಾಲ್ನಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಅಪಾರ ಪ್ರಮಾಣದ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ತೋರಣಗಲ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ