ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಶಾನ್ಯ ರಾಜ್ಯಗಳಲ್ಲಿ ನಿರಂತರ ಮಳೆಯಿಂದಾಗಿ ಮಣಿಪುರದಲ್ಲಿ ಪ್ರವಾಹದ ವಾತಾವರಣ ನಿರ್ಮಾಣವಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ.
ಅನೇಕ ಕಡೆ ನದಿಗಳಿಗೆ ಕಟ್ಟಾದ ಒಡ್ಡುಗಳು ಒಡೆದ ಪರಿಣಾಮ ಹಠಾತ್ ಪ್ರವಾಹದಿಂದ 56,000 ಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾಹದಿಂದ 10,477 ಮನೆಗಳು ಹಾನಿಗೊಳಗಾಗಿದ್ದು, 56,516,174 ಜನರು ತೊಂದರೆಗೆ ಸಿಲುಕಿದ್ದಾರೆ. ಸೋಮವಾರ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ನದಿಯಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದಾರೆ. ಪ್ರವಾಹ ಸಂಕಷ್ಟಕ್ಕೆ ಒಳಗಾದ 2,913 ಜನರನ್ನು ಸುರಕ್ಷಿತ ತಾಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅದು ತಿಳಿಸಿದೆ.
ಇಂಫಾಲ ಪೂರ್ವ ಜಿಲ್ಲೆಯ ಬಶಿಖಾಂಗ್‌ನಲ್ಲಿ ಕೊಂಗ್ಬಾ ನದಿಗೆ ಅಡ್ಡಲಾಗಿ ನಿರ್ಮಾಣವಾಗಿರುವ ಒಡ್ಡುಗಳು ಒಡೆದು ಹೋಗಿದೆ. ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಕೆ ಮಾಡಿದಾಗ ಇಂಫಾಲ ಹೆಚ್ಚು ಹಾನಿಗೊಂಡಿದ್ದು, ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಕನಿಷ್ಠ 57 ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಖುರೈ, ಹೀಂಗಾಂಗ್ ಮತ್ತು ಚೆಕಾನ್ ಪ್ರದೇಶಗಳಲ್ಲಿ ನದಿಯ ಪ್ರವಾಹವು ಒಡ್ಡುಗಳನ್ನು ಒಡೆದು ಉಕ್ಕಿ ಹರಿಯುತ್ತಿರುವುದರಿಂದ ರಾಜ್ಯದ ರಾಜಧಾನಿ ಇಂಫಾಲ್‌ನ ಹಲವಾರು ಪ್ರದೇಶಗಳು ಮತ್ತು ಇಂಫಾಲ್ ಪೂರ್ವ ಜಿಲ್ಲೆಯ ಹಲವು ಭಾಗಗಳು ಜಲಾವೃತಗೊಂಡಿವೆ.