ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನಲ್ಲಿ ಭೀಕರ ಮಳೆ ಹಾಗೂ ಪ್ರವಾಹ ಉಂಟಾದ ಪರಿಣಾಮ 38 ಮಂದಿ ಸಾವನ್ನಪ್ಪಿದ್ದು, ಸುಮಾರು 5 ಲಕ್ಷಕ್ಕೂ ಅಧಿಕ ಮಂದಿ ಅತ್ರಂತ್ರಗೊಂಡಿದ್ದಾರೆ.
ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಕರೆ ಮಾಡಿ ಅಲ್ಲಿನ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದಿದ್ದಾರೆ.
ಹಿಮಂತ ಬಿಸ್ವಾ ಶರ್ಮಾ ದೂರವಾಣಿ ಕರೆ ಮೂಲಕ ಮೋದಿಗೆ ಅಸ್ಸಾಂನ ಪ್ರವಾಹ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಈ ವೇಳೆ ಮೋದಿ, ಕೇಂದ್ರ ಸರ್ಕಾರ ಸಂಪೂರ್ಣ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಕುರಿತು ಶರ್ಮಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಸ್ವಲ್ಪ ಸಮಯದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನಲ್ಲಿನ ಪ್ರವಾಹ ಪರಿಸ್ಥಿತಿಯನ್ನು ವಿಚಾರಿಸಲು ನನಗೆ ಕರೆ ಮಾಡಿದ್ದರು.
ಅಸ್ಸಾಂ ಮತ್ತು ಪಕ್ಕದ ರಾಜ್ಯಗಳಲ್ಲಿ ನಿರಂತರ ಮಳೆಯಿಂದಾಗಿ ಪ್ರವಾಹ ಉಂಟಾಗಿ ಅನೇಕ ಜನರ ಜೀವನ ಹೇಗೆ ಪರಿಣಾಮ ಬೀರಿದೆ ಎಂಬುದರ ಕುರಿತು ನಾನು ಅವರಿಗೆ ವಿವರಿಸಿದೆ. ಅಲ್ಲದೇ ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕಾರ್ಯಾಚರಣೆಯ ಬಗ್ಗೆಯೂ ತಿಳಿಸಿದ್ದೇನೆ.