SHOCKING | ಮಸೀದಿ ಆವರಣದಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾ*ಚಾರ, ಆರೋಪಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

6 ವರ್ಷ ವಯಸ್ಸಿನ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ.

ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸರು ಮೌಲ್ವಿಯ ತಂದೆಯವಿರುದ್ಧ ಎಫ್‌ಐಆರ್ ದಾಖಲಿಸಿ ನಂತರ ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.

ಮೌಲ್ವಿಯ ತಂದೆಯಾಗಿರುವ ಆರೋಪಿಗೆ ಗೌರವದ ದೃಷ್ಟಿಯಿಂದ ಮಸೀದಿ ಆವರಣದಲ್ಲಿ ಉಳಿಯಲು ಕೊಠಡಿ ನೀಡಲಾಗಿದ್ದು, ಇದನ್ನು ದುರುಪಯೋಗಪಡಿಸಿಕೊಂಡಿರುವ ಆರೋಪಿಯು ಬಾಲಕಿಗೆ ಚಾಕೊಲೇಟ್ ಕೊಡಿಸುವ ಆಸೆ ತೋರಿಸಿ, ಅತ್ಯಾಚಾರ ಎಸಗಿದ್ದಾನೆಂದು ಆರೋಪಿಸಲಾಗಿದೆ.

ಉತ್ತರ ಪ್ರದೇಶದ ಮೂಲದವನಾಗಿರುವ ಆರೋಪಿ, 20 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರಕೆ ಬಂದಿದ್ದು, ಅಂದಿನಿಂದ ಪಾದಚಾರಿ ಮಾರ್ಗದಲ್ಲಿ ಬಟ್ಟೆಗಳನ್ನು ಮಾರಾಟ ಮಾಡಿ, ಜೀವನ ಸಾಗಿಸುತ್ತಿದ್ದ ಎನ್ನಲಾಗಿದೆ.

ಘಟನೆ ಬೆಳಕಿಗೆ ಬಂದ ನಂತರ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಮಸೀದಿಯಲ್ಲಿ ಆರೋಪಿಗೆ ಆಶ್ರಯ ನೀಡಿದ ಹಿನ್ನೆಲೆಯಲ್ಲಿ ಸ್ಥಳೀಯ ಜಮಾತ್ ವಿರುದ್ಧ ಕಿಡಿಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!