ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರದ ನಡವಳಿಕೆಯಿಂದ ದಕ್ಷಿಣ ಕನ್ನಡ ,ಕರಾವಳಿ ಭಾಗದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹಾಳಾಗುತ್ತಿದೆ. ಇದನ್ನು ನೋಡಿಕೊಂಡು ಬಿಜೆಪಿ ಕೈಕಟ್ಟಿಕೊಂಡು ಕೂರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವಿಷಯವಾಗಿ ಸೋಮವಾರ ರಾತ್ರಿ ರಾಷ್ಟ್ರೀಯ ಮುಖಂಡರ ಜೊತೆ ಚರ್ಚೆ ಮಾಡಿದ್ದೇನೆ. ಇವತ್ತು ನಮ್ಮ ಸಂಸದರು, ಶಾಸಕರು ಪೊಲೀಸ್ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವರ ಗಡೀಪಾರು ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, ರಾಜ ಮಹಾರಾಜರು ಹಿಂದೆ ನಮ್ಮ ದೇಶವನ್ನು ಆಳಿದ್ದರು. ಆಗ ಪಾಳೇಗಾರರು ಇದ್ದ ಬಗ್ಗೆ ನಾವು ಕೇಳಿದ್ದೇವೆ. ಆ ಪಾಳೇಗಾರಿಕೆಯನ್ನು ಹಂಗಿಸುವಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.