ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆರೆದ ಬಸ್‌ನಲ್ಲಿ ಆರ್‌ಸಿಬಿ ವಿಜಯೋತ್ಸವ ಇಲ್ಲ. ಆರ್‌ಸಿಬಿ ಆಟಗಾರರು ಬಸ್ಸಿನಲ್ಲಿ ಬಂದು ಬಸ್ಸಿನಲ್ಲಿ ಹೋಗುತ್ತಾರೆ ಎಂದು ಗೃಹಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ತಂಡವು ಇಂದು ಬೆಂಗಳೂರಿನಲ್ಲಿ ವಿಜಯಯಾತ್ರೆ ನಡೆಸಲಿದೆ. ಅಹಮದಾಬಾದ್ನಿಂದ ಆರ್‌ಸಿಬಿ ತಂಡವು ವಿಶೇಷ ವಿಮಾನದ ಮೂಲಕ ಇಂದು ಮಧ್ಯಾಹ್ನ 1.30 ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಆ ಬಳಿಕ ವಿಜಯಯಾತ್ರೆಗೆ ಸಿದ್ಧತೆಯನ್ನು ನಡೆಸಲಿದೆ.
ಸಂಜೆ 3.30 ಕ್ಕೆ ಬೆಂಗಳೂರಿನ ವಿಧಾನಸೌಧದಿಂದ ಆರ್‌ಸಿಬಿ ತಂಡದ ವಿಜಯಯಾತ್ರೆ ಆರಂಭವಾಗಲಿದ್ದು, ಎಂ. ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಈ ಪರೇಡ್ ಮುಂದುವರೆಯಲಿದೆ.
ಇನ್ನು ಈ ವಿಜಯಯಾತ್ರೆ ವೇಳೆ 2024 ರಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆರ್‌ಸಿಬಿ ಮಹಿಳಾ ತಂಡವನ್ನು ಸಹ ಕರೆತರುವ ಸಾಧ್ಯತೆಯಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಎರಡು ಟ್ರೋಫಿಗಳೊಂದಿಗೆ ವಿಜಯಯಾತ್ರೆ ನಡೆಸುವ ಬಗ್ಗೆ ಚಿಂತಿಸಿದೆ.