ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಐಪಿಎಲ್ -2025ನಲ್ಲಿ ಕಪ್ ಗೆದ್ದು ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇನ್ನು ಕೆಲವೇ ಹೊತ್ತಿನಲ್ಲಿ ಬೆಂಗಳೂರಿಗೆ ಆಗಮಿಸಲಿದ್ದು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ.
ಸಂಜೆ 6 ಗಂಟೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಆರ್ ಸಿಬಿ ಆಟಗಾರರ ಸಂಭ್ರಮಾಚರಣೆ ನಡೆಯಲಿದೆ. ಅದಕ್ಕೂ ಮೊದಲು ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ತಂಡದ ಆಟಗಾರರ ವಿಜಯೋತ್ಸವ ಮೆರವಣಿಗೆಯನ್ನು ನಡೆಸುವುದೆಂದು ತೀರ್ಮಾನವಾಗಿತ್ತು.
ಆದರೆ ವಿಜಯೋತ್ಸವ ಮೆರವಣಿಗೆ ಕೊನೆಕ್ಷಣದಲ್ಲಿ ರದ್ದಾಗಿದೆ. ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರ ಮೆರವಣಿಗೆ ಇಲ್ಲ. ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ ಎಂದು ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೊ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಲಾಗಿದೆ.