ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಿಂದ ಆದ ಜೀವಹಾನಿ ಮತ್ತು ಗಾಯಗೊಂಡವರ ಬಗ್ಗೆ ಕೇಳಿ ತೀವ್ರ ದುಃಖವಾಗಿದೆ ಎಂದು ಉದ್ಯಮಿ ವಿಜಯ್ ಮಲ್ಯ ತಿಳಿಸಿದ್ದಾರೆ.
ಐಪಿಎಲ್ ಚಾಂಪಿಯನ್ ವಿಜಯೋತ್ಸವ ಆಚರಿಸಲು ಬಂದಿದ್ದ ಆರ್‌ಸಿಬಿ ಅಭಿಮಾನಿಗಳು ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪಗಳು, ಓಂ ಶಾಂತಿ ಎಂದು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.
ಆರ್‌ಸಿಬಿ ಗೆಲುವು ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ 11 ಆರ್‌ಸಿಬಿ ಫ್ಯಾನ್ಸ್ ದುರ್ಮರಣಕ್ಕೀಡಾಗಿದ್ದಾರೆ. 50ಕ್ಕೂ ಹೆಚ್ಚು ಗಂಭೀರವಾಗಿ ಗಾಯಗೊಂಡಿದ್ದಾರೆ.