ಕಾಲ್ತುಳಿತದಲ್ಲಿ 11 ಮಂದಿ ಸಾವು: ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಮೃತಪಟ್ಟಿದ್ದಾರೆ. ಇವರ ಮರಣೋತ್ತರ ಪರೀಕ್ಷೆ ನಡೆದಿದ್ದು, ಮೃತದೇಹಗಳನ್ನು ಕುಟುಂಬಸ್ಥರಿಗೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಬೌರಿಂಗ್‌ನಲ್ಲಿ 6 ಹಾಗೂ ವಿಕ್ಟೋರಿಯಾದಲ್ಲಿ 5 ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ವೈದ್ಯರ ಮರಣೋತ್ತರ ಪರೀಕ್ಷೆಯಲ್ಲಿ ಮೃತಪಟ್ಟವರ ಸಾವಿಗೆ ಕಾರಣ ಬಯಲಾಗಿದೆ. ಎಲ್ಲರೂ ಉಸಿರಾಟ ಸಮಸ್ಯೆಯಿಂದ ಮೃತಪಟ್ಟಿರುವುದು ವರದಿಯಲ್ಲಿ ದೃಢಪಟ್ಟಿದೆ.

ಕೆಲವರು ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದರೇ ಇನ್ನೂ ಕೆಲವರು ಕೆಲ ಮೃತರ ಎದೆಯ ಭಾಗದಲ್ಲಿ ಹೆಚ್ಚು ಒತ್ತಡ ಬಿದ್ದು ಮೃತಪಟ್ಟಿದ್ದಾರೆ. ಮತ್ತೆ ಕೆಲವರು ಉಸಿರುಗಟ್ಟುವಿಕೆ ಆರಂಭ ಆಗಿ 15ರಿಂದ 18 ನಿಮಿಷದಲ್ಲಿ ಸಾವನ್ನಪ್ಪಿದ್ದಾರೆ. 13 ವರ್ಷದ ಬಾಲಕಿ ಕೂಡ ಉಸಿರುಗಟ್ಟುವಿಕೆಯಿಂದ ಕೊನೆಯುಸಿರೆಳೆದಿದ್ದಾಳೆ. ಸಾವಿಗೆ ಉಸಿರುಗಟ್ಟುವಿಕೆ ಬಿಟ್ಟರೆ ಬೇರೆ ಯಾವುದೇ ರೀತಿಯ ಅಂಶ ಕಂಡು ಬಂದಿಲ್ಲ.

ಇನ್ನು ವಿಕ್ಟೋರಿಯಾ ಆಸ್ಪತ್ರೆಯ ಮರಣೋತ್ತರ ಪರೀಕ್ಷೆಯಲ್ಲಿ ಕೂಡ ಇದೇ ವರದಿ ಬಂದಿದೆ. ಇಬ್ಬರು ಉಸಿರುಗಟ್ಟುವಿಕೆಯಿಂದ ಹೃದಯ ಸ್ತಂಭನ ಉಂಟಾಗಿ ಉಸಿರನ್ನು ಚೆಲ್ಲಿದ್ದಾರೆ. ಮತ್ತೊಬ್ಬರಿಗೆ ಉಸಿರುಗಟ್ಟುವಿಕೆ ಜೊತೆಗೆ ಮೂಳೆ ಮುರಿತ ಉಂಟಾಗಿ ಮೃತಪಟ್ಟಿದ್ದು, ಉಳಿದವರು ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here