ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ನ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಫೈನಲ್ ಕದನದಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್, ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸುವ ಮೂಲಕ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿತ್ತು.
ಬಳಿಕ ಸಂಭ್ರಮಾಚರಣೆಗಾಗಿ ಆರ್ಸಿಬಿ ತಂಡ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಭೀಕರ ಕಾಲ್ತುಳಿತ ಉಂಟಾಗಿತ್ತು. ಘಟನೆಯಲ್ಲಿ 11 ಜನರು ಮೃತಪಟ್ಟಿದ್ದಾರೆ. ಈ ಮಧ್ಯೆ ನಿನ್ನೆ ಒಂದೇ ದಿನ ಮೆಟ್ರೋದಲ್ಲಿ 9,66,732 ಜನರು ಪ್ರಯಾಣ ಮಾಡುವ ಮೂಲಕ ನಮ್ಮ ಮೆಟ್ರೋ ಹೊಸ ದಾಖಲೆ ಬರೆದಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮದ ಪ್ರಕಾರ, ಎಂದಿಗಿಂತ ನಿನ್ನೆ ಪ್ರಯಾಣಿಕರ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿತ್ತು. ನೇರಳೆ ಮಾರ್ಗದಲ್ಲಿ 4,78,334 ಜನರು ಪ್ರಯಾಣ ಮಾಡಿದರೆ, ಮಾದಾವರ ಟು ಸಿಲ್ಕ್ ಇನ್ಸ್ಟಿಟ್ಯೂಟ್ (ಹಸಿರು ಮಾರ್ಗದಲ್ಲಿ) 2,84,674 ಜನರು ಪ್ರಯಾಣಿಸಿದ್ದಾರೆ. ಮೆಜೆಸ್ಟಿಕ್ ನಿಲ್ದಾಣದಿಂದಲೇ 2,03,724 ಜನರು ಪ್ರಯಾಣ ಮಾಡಿದ್ದಾರೆ.
ಒಟ್ಟಾರೆ ನಿನ್ನೇ ಒಂದೇ ದಿನ ನಮ್ಮ ಮೆಟ್ರೋದಲ್ಲಿ 9,66,732 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಈ ಹಿಂದೆ 8.7 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುವ ಮೂಲಕ ನಮ್ಮ ಮೆಟ್ರೋ ದಾಖಲೆ ಬರೆದಿತ್ತು. ಇದೀಗ ಆ ದಾಖಲೆಯನ್ನು ಮೆಟ್ರೋ ಹಿಂದಿಕ್ಕಿದೆ.