ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆಲಬ್ರೇಷನ್ ಗ್ರೌಂಡ್ ಕ್ಷಣಮಾತ್ರದಲ್ಲಿ ಸೂತಕದ ಮನೆಯಾಗಿದ್ದಕ್ಕೆ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಬೇಸರ ವ್ಯಕ್ತಪಡಿಸಿದ್ದಾರೆ.
ಬೇಸರದಲ್ಲಿಯೇ ಇಂದು ಬೆಂಗಳೂರಿನಿಂದ ಫ್ಲೈಟ್ನಲ್ಲಿ ಮುಂಬೈಗೆ ತೆರಳಲಿದ್ದಾರೆ.ಆರ್ಸಿಬಿ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ವಿರಾಟ್ ಕೊಹ್ಲಿ ಹಾಗೂ ಅವರ ಮಡದಿ ಅನುಷ್ಕಾ ಶರ್ಮಾ ಭಾರದ ಮನಸಿನೊಂದಿಗೆ ಬೆಂಗಳೂರು ತೊರೆದಿದ್ದು, ಇವರಿಬ್ಬರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಜಯೋತ್ಸವದ ಮೆರವಣಿಗೆಯ ಸಮಯದಲ್ಲಿ ನಡೆದ ದುರಂತದ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸಂತಾಪ ಸೂಚಿಸಿದ್ದ ಕೊಹ್ಲಿ, ‘ನನಗೆ ಹೇಳಲು ಪದಗಳಿಲ್ಲ. ಈ ಘಟನೆ ಬೇಸರ ತರಿಸಿದೆ ಎಂದು ಬರೆದುಕೊಂಡಿದ್ದಾರೆ.