February 3, 2026
Tuesday, February 3, 2026
spot_img

ʻಲ್ಯಾಂಡ್‌ಲಾರ್ಡ್‌ʼ ಚಿತ್ರಕ್ಕೆ ತೆರಿಗೆ ವಿನಾಯಿತಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಟ ದುನಿಯಾ ವಿಜಯ್‌ ಹಾಗೂ ರಚಿತಾ ರಾಮ್‌ ಅಭಿನಯದ ಲ್ಯಾಂಡ್‌ ಲಾರ್ಡ್‌ ಸಿನಿಮಾ ತಂಡಕ್ಕೆ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ.

ಈ ಸಿನಿಮಾದಲ್ಲಿ ಸಾಮಾಜಿಕ ಕಳಕಳಿಯಿದೆ, ಈ ಕಾರಣದಿಂದ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಸಿಗಲಿದೆ. ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ʻಲ್ಯಾಂಡ್‌ಲಾರ್ಡ್ʼ‌ ಸಿನಿಮಾವು ತೆರೆಗೆ ಬರುವುದಕ್ಕೂ ಮುನ್ನವೇ ವಿಜಯ್‌, ನಿರ್ದೇಶಕ ಜಡೇಶ್‌ ಕೆ ಹಂಪಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದರು. ತಮ್ಮ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಬೇಕೆಂದು ಮನವಿ ಮಾಡಿದ್ದರು. ಇದೀಗ ರಾಜ್ಯ ಸರ್ಕಾರವು ತೆರಿಗೆ ವಿನಾಯಿತಿ ಘೋಷಿಸಿದೆ.

ಇದನ್ನೂ ಓದಿ: CINE | ‘ಧುರಂಧರ್ 2’ ಫಸ್ಟ್ ಲುಕ್ ಪೋಸ್ಟರ್ ಔಟ್! ಅಕ್ಷಯ್ ಖನ್ನಾ ಇರೋದು ಪಕ್ಕಾ ಅಂತೆ

ಎಲ್ಲಕ್ಕಿಂತ ಮುಖ್ಯವಾಗಿ ಇದರಿಂದ ನಿರ್ಮಾಪಕರಿಗೆ ಆರ್ಥಿಕ ಲಾಭವಾಗುತ್ತದೆ. ಸಾಮಾನ್ಯವಾಗಿ ಸಿನಿಮಾದ ಟಿಕೆಟ್ ಮೇಲೆ 12% ಅಥವಾ 18% ಜಿಎಸ್‌ಟಿ ಇರುತ್ತದೆ. ಇದರಲ್ಲಿ ರಾಜ್ಯ ಸರ್ಕಾರದ ಪಾಲು ಅರ್ಧದಷ್ಟಿರುತ್ತದೆ. ಸರ್ಕಾರ ತೆರಿಗೆ ವಿನಾಯಿತಿ ನೀಡಿದರೆ, ಟಿಕೆಟ್ ಬೆಲೆ ಕಡಿಮೆಯಾಗುತ್ತದೆ. ಇದರಿಂದ ಸಾಮಾನ್ಯ ಪ್ರೇಕ್ಷಕರಿಗೆ ಕಡಿಮೆ ದರದಲ್ಲಿ ಸಿನಿಮಾ ನೋಡುವ ಅವಕಾಶ ಸಿಗುತ್ತದೆ. ಟಿಕೆಟ್ ದರ ಕಡಿಮೆಯಾದರೆ, ಸಹಜವಾಗಿಯೇ ಹೆಚ್ಚು ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !