ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೆಟ್ರೋ ನಿಲ್ದಾಣದ ಕೆಳಗೆ ಪೋಷಕರೊಟ್ಟಿಗೆ ಮಲಗಿದ್ದ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಬುಧವಾರ ತಡರಾತ್ರಿ ದಿನಗೂಲಿ ಕಾರ್ಮಿಕರ ಮಗಳಾದ ಬಾಲಕಿ ಮೆಟ್ರೋ ನಿಲ್ದಾಣದ ಕೆಳಗೆ ಮಲಗಿದ್ದಾಗ ಘಟನೆ ನಡೆದಿದೆ. ಆರೋಪಿಯು ಬಾಲಕಿ ಪೋಷಕರೊಟ್ಟಿಗೆ ಮಲಗಿದ್ದಾಗಲೇ ಹೊತ್ತೊಯ್ದು ಏಕಾಂತ ಸ್ಥಳದಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಉಪ ಪೊಲೀಸ್ ಆಯುಕ್ತ (ಕೇಂದ್ರ) ಆಶಿಶ್ ಕುಮಾರ್ ಶ್ರೀವಾಸ್ತವ್ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ಬಾಲಕಿಯನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.