ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಜಿಡಿಪಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸತತ 3ನೇ ಬಾರಿಗೆ ರೆಪೋ ದರ ಕಡಿತಗೊಳಿಸಿದೆ. ನಿರೀಕ್ಷೆಗೂ ಮೀರಿ 50 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು ರೆಪೋ ಬಡ್ಡಿ ದರ ಶೇ.6 ರಿಂದ ಶೇ.5.50ಕ್ಕೆ ಇಳಿಕೆಯಾಗಿದೆ.
ಆರ್‌ಬಿಐನ ಹಣಕಾಸು ನೀತಿ ಸಮಿತಿಯು ಸಭೆಯ ಬಳಿಕ 50 ಮೂಲಾಂಶದಷ್ಟು ರೆಪೋ ದರ ಕಡಿಮೆ ಮಾಡಲು ನಿರ್ಧರಿಸಿರುವುದಾಗಿ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ.
ಇದರಿಂದ ಸಾಲ ಮತ್ತು ಇಎಂಐಗಳ ಬಡ್ಡಿ ದರವೂ ಇಳಿಕೆಯಾಗಲಿದೆ. ಜೊತೆಗೆ ಹೊಸ ಸಾಲಗಾರರಿಗೆ ಗೃಹ ಸಾಲಗಳು, ವಾಹನದ ಮೇಲಿನ ಸಾಲಗಳು ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ. ಆಟೊ ಮೋಬೈಲ್, ಕಾರ್ಪೊರೇಟ್ ಸಾಲಗಳ ಮೇಲಿನ ಮರುಪಾವತಿ ಕಂತುಗಳಲ್ಲಿಯೂ ಇಳಿಕೆಯಾಗುವ ನಿರೀಕ್ಷೆ ಇದೆ.