ವಿಶ್ವದ ಅತಿ ಎತ್ತರದ ಕಮಾನು ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸಿಎಂ ಒಮರ್ ಅಬ್ದುಲ್ಲಾ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಉಪಸ್ಥಿತರಿದ್ದರು.

ಚೆನಾಬ್ ಸೇತುವೆಯ ನಂತರ, ಜಮ್ಮು- ಕಾಶ್ಮೀರದಲ್ಲಿ ಅಂಜಿ ನದಿಯ ಮೇಲೆ ನಿರ್ಮಿಸಲಾದ ದೇಶದ ಮೊದಲ ಕೇಬಲ್-ಸ್ಟೇಡ್ ರೈಲು ಸೇತುವೆ ಇದಾಗಿದೆ. ಈ ಕಾರ್ಯಕ್ರಮ ನಂತರ ಪ್ರಧಾನಿಯವರು ಕತ್ರಾದಿಂದ ಶ್ರೀನಗರಕ್ಕೆ ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ ತೋರಲಿದ್ದಾರೆ.

ನದಿಯಿಂದ 359 ಮೀಟರ್ ಎತ್ತರದಲ್ಲಿರುವ ವಾಸ್ತುಶಿಲ್ಪದ ಅದ್ಭುತ ಚೆನಾಬ್ ರೈಲು ಸೇತುವೆಯು ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾಗಿದೆ. ಇದು ಭೂಕಂಪ ಮತ್ತು ಪ್ರಬಲ ಗಾಳಿಯ ಪರಿಸ್ಥಿತಿಗಳನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾದ 1,315 ಮೀಟರ್ ಉದ್ದದ ಉಕ್ಕಿನ ಕಮಾನು ಸೇತುವೆಯಾಗಿದೆ. ಇದು ಜಮ್ಮು-ಶ್ರೀನಗರ ನಡುವಿನ ಸಂಪರ್ಕವನ್ನು ಹೆಚ್ಚಿಸುವುದು.

ಸೇತುವೆಯ ಮೇಲೆ ಚಲಿಸುವ ವಂದೇ ಭಾರತ್ ರೈಲು ಮೂಲಕ, ಕತ್ರಾ ಮತ್ತು ಶ್ರೀನಗರ ನಡುವೆ ಪ್ರಯಾಣಿಸಲು ಕೇವಲ 3 ಗಂಟೆಗಳು ಬೇಕಾಗುತ್ತದೆ, ಇದು ಈಗಿನ ಪ್ರಯಾಣದ ಸಮಯವನ್ನು 2-3 ಗಂಟೆಗಳಷ್ಟು ಕಡಿಮೆ ಮಾಡುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!