ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲ್ತುಳಿತ ಪ್ರಕರಣದಲ್ಲಿ ಡಿಸಿಎಂ ಡಿಕೆಶಿಯದ್ದು ಡ್ರಾಮಾ ಕಣ್ಣೀರು ಎಂಬ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರ ಕುರಿತು ರಾಮನಗರದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ತಿರುಗೇಟು ನೀಡಿದ್ದಾರೆ.
ಡ್ರಾಮಾ ಮಾಡೋದ್ರಲ್ಲಿ ಕುಮಾರಸ್ವಾಮಿ ಎಕ್ಸ್ಫರ್ಟ್. ಅದು ಇಡೀ ರಾಜ್ಯದ ಜನರಿಗೆ ಗೊತ್ತು. ಯಾವ ಸಂದರ್ಭದಲ್ಲಿ ಯಾವ ರೀತಿ ಡ್ರಾಮಾ ಆಡಬೇಕು, ವಿಷಯಗಳನ್ನ ಯಾವ ರೀತಿ ತಿರುಚಬೇಕು ಅನ್ನೋದು ಗೊತ್ತಿದೆ. ಅವರಿಗೆ ಸತ್ತವರ ಬಗ್ಗೆ ಅನುಕಂಪ ಇದ್ಯೋ, ರಾಜಕೀಯ ಇದ್ಯೋ, ಅನುಕಂಪ ಇಲ್ವೇ ಇಲ್ವ? ಅವರು ಯಾವತ್ತೂ ಸತ್ತವರ ಮೇಲೆ ರಾಜಕಾರಣ ಮಾಡಿಕೊಂಡು ಬೆಳೆದು ಬಂದವರು. ಅವರಿಗೆ ಯಾವತ್ತೂ ಸಾರ್ವಜನಿಕ ಹಿತಾಸಕ್ತಿ ಬಗ್ಗೆ ಗೌರವ ಇಲ್ಲ ಎಂದಿದ್ದಾರೆ.
ಇವತ್ತೂ ರಾಜಕೀಯಕ್ಕಾಗಿ ಆರೋಪ ಮಾಡ್ತಿದ್ದಾರೆ. ಸರ್ಕಾರದ ಕಾರ್ಯಕ್ರಮ ಇದ್ದಿದ್ದರಿಂದ ಡಿಕೆಶಿ ಅಲ್ಲಿ ಹೋಗಿದ್ರು. ವಿಧಾನಸೌದದಲ್ಲಿ ಕಾರ್ಯಕ್ರಮ ಮುಗಿದ ಬಳಿಕ ಕಾಲ್ತುಳಿತ ಆಗಿದೆ ಅಂತ ಗೊತ್ತಾಯ್ತು. ಹಾಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮ ವೈಂಡಪ್ ಮಾಡಿಸೋಕೆ ಹೋಗಿದ್ರು. ಬಳಿಕ 10 ನಿಮಿಷದಲ್ಲಿ ಕಾರ್ಯಕ್ರಮ ಮುಗಿಸಲಾಗಿದೆ. ರಾಜಕೀಯವಾಗಿ ಏನೋ ಹೇಳಬೇಕು ಕುಮಾರಸ್ವಾಮಿ ಹೇಳ್ತಿದ್ದಾರೆ ಎಂದು ಕಿಡಿಕಾರಿದರು.