ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲಯಾಳಂ ಚಿತ್ರರಂಗದ ಖ್ಯಾತ ನಟ ಶೈನ್ ಟಾಮ್ ಚಾಕೋ ಭೀಕರ ಕಾರ್ ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದ ಅವರ ತಂದೆ ಸಿ.ಪಿ. ಚಾಕೊ ಸ್ಥಳದಲ್ಲೇ ಮೃತರಾಗಿದ್ದಾರೆ. ಶೈನ್ ಟಾಮ್ ಚಾಕೊ ಮತ್ತು ಅವರ ತಾಯಿಗೂ ಗಾಯಗಳಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತಮಿಳುನಾಡಿನಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಅಪಘಾತದ ಬಳಿಕ ಧರ್ಮಪುರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಶೈನ್ ಟಾಮ್ ಚಾಕೊ ಮತ್ತು ಅವರ ತಾಯಿಯನ್ನು ದಾಖಲಿಸಲಾಗಿದೆ. ಮುಂಜಾನೆ 7 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿತು. ಶೈನ್ ಟಾಮ್ ಚಾಕೊ ಅವರು ತಮ್ಮ ಕುಟುಂಬದವರ ಜೊತೆ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಬಂದು ಗುದ್ದಿದೆ ಎನ್ನಲಾಗಿದೆ.