ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಾನು ಆರ್ಸಿಬಿ ಆಟಗಾರರನ್ನು ಕನ್ನಡ ಧ್ವಜ ಕೊಟ್ಟು ಸ್ವಾಗತಿಸಿದ್ದೇನೆ. ಅದು ತಪ್ಪಾ? ಇದರಲ್ಲಿ ನಾನೇನು ಅಪರಾಧ ಮಾಡಿದ್ದೇನೆ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ರಾಜೀನಾಮೆ ಕೇಳ್ತಿದ್ದಾರೆ, ನಾನು ಹೆಣದ ಮೇಲೆ ರಾಜಕೀಯ ಮಾಡಲ್ಲ ಎಂದು ಹೇಳಿದರು.
ಅಂದು ಅವರು ಹೋಗೋದಕ್ಕೂ ಕೂಡ ಜಾಗ ಇರಲಿಲ್ಲ. ಅವರನ್ನ ನಾನು ಕಾರಿನಲ್ಲಿ ಕೂರಿಸಿಕೊಂಡು ಹೋದೆ. ದುರಂತದ ಬಗ್ಗೆ ಮಾಧ್ಯದವರು ಹೇಳಿದ ಬಳಿಕವೇ ನಮಗೆ ಗೊತ್ತಾಯ್ತು. ನಾನು ಡರ್ಟಿ ಪಾಲಿಟಿಕ್ಸ್ ಮಾತಾಡಲ್ಲ. ಇದು ನಮ್ಮ ಮನೆಯ ನೋವು. ಸದನದಲ್ಲಿ ಎಲ್ಲವೂ ಬರಲಿದೆ. ಡಾ. ರಾಜ್ ಕುಮಾರ್ ಮೃತಪಟ್ಟಾಗ ಏನಾಯ್ತು ಅಂತ ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ