ಬೆಂಗಳೂರು ಕಾಲ್ತುಳಿತ ಪ್ರಕರಣ: ಬಂಧಿತ ನಾಲ್ವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ವರಿಗೆ ಹೈಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಡಿಎನ್‌ಎ ಸಂಸ್ಥೆಯ ಸಿಬ್ಬಂದಿ ಕಿರಣ್, ಸುಮಂತ್, ಸುನೀಲ್ ಮ್ಯಾಥ್ಯೂ ಹಾಗೂ ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆಯನ್ನು ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಿದ್ದರು. ಈ ನಡುವೆ ಬಂಧಿತರನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತಾದರೂ ನ್ಯಾಯಾಲಯ ಆರೋಪಿಗಳಿಗೆ ಜೂ.19ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here