ಐಸಿಯುನಲ್ಲಿ ದಾಖಲಾದ ರೋಗಿಗೆ ಮತ್ತು ಬರುವ ಇಂಜೆಕ್ಷನ್ ನೀಡಿ ಸಿಬ್ಬಂದಿಯಿಂದಲೇ ಅತ್ಯಾಚಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ರೋಗಿಗೆ ಮತ್ತು ಬರುವ ಇಂಜೆಕ್ಷನ್ ನೀಡಿ ನರ್ಸಿಂಗ್ ಸಿಬ್ಬಂದಿ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಅಲ್ವಾರ್‌ನಲ್ಲಿರುವ ವೈದ್ಯಕೀಯ ಕಾಲೇಜು ಆಸ್ಪತ್ರೆಯೊಂದರಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆಯ ಕುಟುಂಬಸ್ಥರು ಐಸಿಯು ವಾರ್ಡ್‌ನ ಹೊರಗಿದ್ದಾಗಲೇ ಈ ಘಟನೆ ನಡೆದಿದೆ.
ಸುಮಾರು 32 ವರ್ಷ ವಯಸ್ಸಿನ ಮಹಿಳೆಯನ್ನು ಟ್ಯೂಬೆಕ್ಟಮಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆ ನಂತರ ಆಕೆಯನ್ನು ಐಸಿಯುಗೆ ಸ್ಥಳಾಂತರಿಸಲಾಗಿದ್ದು ಈ ವೇಳೆ ನರ್ಸಿಂಗ್ ಸಿಬ್ಬಂದಿ ಮಹಿಳೆಗೆ ಮತ್ತು ಬರುವ ಇಂಜೆಕ್ಷನ್ ನೀಡಿದ್ದಾನೆ. ಆಕೆ ನಿದ್ದೆಗೆ ಜಾರುತ್ತಿದ್ದಂತೆಯೇ ಪತಿಯನ್ನ ಹೊರ ಹೋಗುವಂತೆ ಸೂಚಿಸಿ ಈ ಕೃತ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಮರುದಿನ ಸಂತ್ರಸ್ತೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಪತಿಗೆ ತಿಳಿಸಿದ್ದಾರೆ. ಪತಿ, ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಘಟನೆ ಬಗ್ಗೆ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!