ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ತಮ್ಮ ‘ಆನ್‌ಲೈನ್ ಹೂಡಿಕೆ ಯೋಜನೆ’ ಉತ್ತೇಜಿಸುವ ಡೀಪ್‌ಫೇಕ್ ವಿಡಿಯೊ ವಿರುದ್ಧ ಗರಂ ಆಗಿರುವ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಈ ಬಗ್ಗೆ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.
ವಿಡಿಯೊದಲ್ಲಿ ಜನರಿಗೆ ವೆಬ್‌ಸೈಟ್‌ನಲ್ಲಿ ಹೂಡಿಕೆ ಮಾಡುವಂತೆ ನಿರ್ದೇಶಿಸಲಾಗುತ್ತಿದೆ. ಮುಗ್ಧ ಜನರನ್ನು ಆಕರ್ಷಿಸಲು ಮತ್ತು ನನ್ನ ಹೆಸರಿನಲ್ಲಿ ಸುಳ್ಳು ಪ್ರಚಾರ ಮಾಡುವ ದುರುದ್ದೇಶದಿಂದ ಈ ವಿಡಿಯೊವನ್ನು ರಚಿಸಿ ಅಪ್‌ಲೋಡ್ ಮಾಡಲಾಗಿದೆ. ಇದರಿಂದಾಗಿ ಮುಗ್ಧ ಜನರು ಹಣ ಕಳೆದುಕೊಳ್ಳುವ ಅಪಾಯವಿದೆ. ವಿಡಿಯೊದ ಮೂಲವನ್ನು ಪತ್ತೆಹಚ್ಚಬೇಕು, ಪ್ರಸಾರವಾಗುತ್ತಿರುವ ವಿಡಿಯೊವನ್ನು ತೆಗೆದುಹಾಕಲು ವಿವಿಧ ಸಾಮಾಜಿಕ ಮಾಧ್ಯಮಗಳಿಗೆ ನಿರ್ದೇಶನ ನೀಡಬೇಕು ಎಂದು ಓವೈಸಿ ದೂರಿನಲ್ಲಿ ತಿಳಿಸಿದ್ದಾರೆ.
ಎಐ ಸೃಷ್ಟಿಸಿದ ನಕಲಿ ವಿಡಿಯೊದಲ್ಲಿ ಓವೈಸಿ ಅವರ ಚಿತ್ರ, ಹೆಸರು ಜೊತೆಗೆ ಇತರ ಪ್ರಸಿದ್ಧ ವ್ಯಕ್ತಿಗಳ ಚಿತ್ರಗಳನ್ನು ಬಳಸಲಾಗಿದೆ. ಈ ವಿಡಿಯೊದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಮತ್ತು ಇನ್ಫೊಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಎಐ ಸೃಷ್ಟಿಯ ಕ್ಲಿಪ್‌ಗಳನ್ನೂ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ