ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಶಿಮ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶಿಮ್ಲಾ ಪ್ರವಾಸದಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಹಠಾತ್ ಏರುಪೇರು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಶಿಮ್ಲಾ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ.
ಪುತ್ರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಶಿಮ್ಲಾ ಪ್ರವಾಸದಲ್ಲಿರುವ ಸೋನಿಯಾಗೆ ಅಧಿಕ ರಕ್ತದೊತ್ತಡ ಹಾಗೂ ಇತರ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬಂದಿತ್ತು. ತಕ್ಷಣ ಅವರನ್ನು ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆತಂದು ತಪಾಸಣೆಗೊಳಪಡಿಸಲಾಯಿತು. ಬಳಿಕ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ. ಅಮನ್ ಅವರು ಹೇಳಿದ್ದಾರೆ.
ಸೋನಿಯಾ ಗಾಂಧಿ, ಸೋಮವಾರ ತಮ್ಮ ಪುತ್ರಿ ಪ್ರಿಯಾಂಕಾ ಅವರೊಂದಿಗೆ ಶಿಮ್ಲಾ ಆಗಮಿಸಿದ್ದರು. ಶಿಮ್ಲಾದ ಹೊರವಲಯದ ಛರಾಬ್ರಾದಲ್ಲಿರುವ ಪ್ರಿಯಾಂಕಾ ಗಾಂಧಿ ಅವರ ಮನೆಯಲ್ಲಿ ಸೋನಿಯಾ ತಂಗಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!