ಬಿಎಸ್‌ವೈ ಮೊಮ್ಮಗನ ಅದ್ಧೂರಿ ಆರತಕ್ಷತೆ ಸಂಭ್ರಮದಲ್ಲಿ ಜೆ.ಪಿ ನಡ್ಡಾ, ಉಪರಾಷ್ಟ್ರಪತಿ ಭಾಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗ, ಬಿ.ವೈ ರಾಘವೇಂದ್ರ ಪುತ್ರ ಸುಭಾಷ್ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಪಾಲ್ಗೊಂಡು ಶುಭಹಾರೈಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸುಭಾಷ್ ಹಾಗೂ ಶ್ರಾವಣಾ ಅದ್ಧೂರಿ ಆರತಕ್ಷತೆ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವರೂ ಆಗಿರುವ ಜೆ.ಪಿ ನಡ್ಡಾ, ಉಪರಾಷ್ಟ್ರಪತಿ ಜಗದೀಪ್ ಧನಕರ್, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ ಪರಮೇಶ್ವರ್ ಭಾಗಿಯಾಗಿ, ನವ ವಧು-ವರರಿಗೆ ಶುಭ ಹಾರೈಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!