ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರ ತಪ್ಪೇ ಮಾಡಿಲ್ಲ, ಪೊಲೀಸರು ತಪ್ಪು ಮಾಡಿದ್ದಾರೆ. ಸರ್ಕಾರಕ್ಕೆ ಯಾಕೆ ಮುಜುಗರ ಆಗಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಕಾಲ್ತುಳಿತ ಪ್ರಕರಣದದಲ್ಲಿ ಪೊಲೀಸರಿಂದಲೇ ತಪ್ಪು ನಡೆದಿದೆ. ನನಗೆ ಬಂದೋಬಸ್ತ್ ಮಾಡಿದ್ದೇವೆ ಎಂದು ತಿಳಿಸಬೇಕಾದವರು ಯಾರು? ನಗರ ಪೊಲೀಸ್ ಆಯುಕ್ತರು ಸರ್ಕಾರಕ್ಕೆ ಏನಾದ್ರೂ ತಿಳಿಸಬೇಕಲ್ವಾ? ಸರ್ಕಾರದ ಮುಖ್ಯ ಕಾರ್ಯದರ್ಶಿಗಾದ್ರೂ ತಿಳಿಸಬೇಕಲ್ವಾ? ಗೃಹ ಸಚಿವರಿಗೂ ಗೊತ್ತಿಲ್ಲ. ನನಗೂ ತಿಳಿಸಿಲ್ಲ. ಈ ದುರಂತದಲ್ಲಿ ಪೊಲೀಸರೇ ತಪ್ಪಿತಸ್ಥರು ಎಂದು ಕಟುವಾಗಿ ಹೇಳಿದ್ದಾರೆ.
ಇಲ್ಲಿ ಯಾರು ಯಾರು ತಪ್ಪು ಮಾಡಿದ್ದಾರೆ ಅವರ ಮೇಲೆ ಕ್ರಮ ತಗೆದುಕೊಂಡಿದ್ದೇವೆ. ವಿಧಾನ ಸೌಧದಲ್ಲಿ ಯಾವುದೇ ದುರಂತ ಸಂಭವಿಸಿಲ್ಲ. ಸ್ಟೇಡಿಯಂನಲ್ಲಿ ನಡೆದ ದುರಂತಕ್ಕೆ ಬೆಂಗಳೂರು ನಗರ ಪೊಲೀಸರನ್ನು ಮಾತ್ರ ಅಲ್ಲ, ಡಿಸಿಪಿ, ಎಸಿಪಿ, ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.