ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರ ಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಲಡ್ಡು ತುಪ್ಪ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಸೇವೆ ಸಲ್ಲಿಸಿದ ಟಿಟಿಡಿ ಮಾಜಿ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನೋಟಿಸ್ ನೀಡಲು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಎಸ್‌ಐಟಿ ಅಧಿಕಾರಿಗಳು ಟಿಟಿಡಿ ಮಾಜಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ, ಧರ್ಮ ರೆಡ್ಡಿ, ಮತ್ತಿತರ ಹಿಂದಿನ ಅಧ್ಯಕ್ಷರು, ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಮಾಜಿ ಟಿಟಿಡಿ ಇಒ ಅನಿಲ್ ಕುಮಾರ್ ಸಿಂಘಾಲ್ ಅವರಿಗೆ ನೋಟಿಸ್ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ತಿರುಪತಿಯ ಪವಿತ್ರ ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪದ ಪೂರೈಕೆ ಆರೋಪದ ತನಿಖೆಯಲ್ಲಿ ಇದು ಮಹತ್ವದ ಬೆಳವಣಿಯಾಗಿದೆ. ಹಗರಣದ ಕೇಂದ್ರಬಿಂದು ಎಂದು ಆರೋಪಿಸಿರುವ ಮೂರು ಡೈರಿಗಳ ನಿರ್ದೇಶಕರಿಗೆ ಜಾಮೀನು ನೀಡುವುದನ್ನು ಕೇಂದ್ರೀಯ ತನಿಖಾ ದಳ ನೇತೃತ್ವದ ಎಸ್‌ಐಟಿ ತೀವ್ರವಾಗಿ ವಿರೋಧಿಸಿದ ಎರಡು ದಿನಗಳ ನಂತರ ಈ ಬೆಳವಣಿಗೆಯಾಗಿದೆ.