ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಸ್ವತ್ತುಗಳು ಇ-ಖಾತಾ ಪಡೆದಿರುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಆದೇಶಿಸಿದೆ.
ಈ ಸಂಬಂಧ ಸೋಮವಾರ ಆದೇಶ ಹೊರಡಿಸಿರುವ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು, ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ ಇ-ಖಾತಾ ನೀಡಲಾಗುತ್ತಿದೆ. ಆದುದರಿಂದ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮತ್ತು ವಿತರಣೆ ವ್ಯವಸ್ಥೆ ಮಾಡಲಾಗಿದೆ. ಅದರ ಜತೆಗೆ ಸ್ವತ್ತುಗಳಿಗೆಇ-ಖಾತಾವನ್ನು ಆನ್ಲೈನ್ಮೂಲಕ ನೀಡಲಾಗುತ್ತಿದೆ. ಇದೀಗ ಎರಡೂ ತಂತ್ರಾಂಶವನ್ನು ಏಕೀಕರಣಗೊಳಿಸಲಾಗುತ್ತಿದೆ. ಹೀಗಾಗಿ ಕಟ್ಟಡನಕ್ಷೆ ಮಂಜೂರಾತಿಗೆ ಅರ್ಜಿಸಲ್ಲಿ ಸುವವರು ಮೊದಲು ಇ-ಖಾತಾವನ್ನು ಪಡೆದಿರಬೇಕಿದೆ.
ಹೀಗಾಗಿ ಜು. 1ರಿಂದ ನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸುವವರುಇ-ಖಾತಾ ಅಥವಾ ಇಪಿಐಡಿ ಸಂಖ್ಯೆಯನ್ನು ತಂತ್ರಾಂಶದಲ್ಲಿ ನಮೂದಿಸುವುದು ಹಾಗೂ ಇ- ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇ-ಖಾತಾ ಸಲ್ಲಿಸದ ಅರ್ಜಿಗಳನ್ನು ಕಟ್ಟಡ ನಕ್ಷೆ ಮಂಜೂರಾತಿಗೆ ಪರಿಗಣಿಸದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.