ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲಿವುಡ್ ನಟ ಕಮಲ್ ಹಾಸನ್ ನಿರ್ಮಿಸಿ ನಟಿಸಿರುವ ಬಹು ನಿರೀಕ್ಷಿತ ‘ಥಗ್ ಲೈಫ್’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯಾಗುತ್ತದೆಯೇ ಎಂಬುದರ ಬಗ್ಗೆ ಸ್ಪಷ್ಟತೆ ಇಂದು ಹೊರಬೀಳಲಿದೆ. ವಿವಾದಾತ್ಮಕ ಹೇಳಿಕೆಯ ಬೆನ್ನಲ್ಲೇ ಕರ್ನಾಟಕದಲ್ಲಿ ತಮ್ಮ ಸಿನಿಮಾ ರಿಲೀಸ್ಗೆ ಭದ್ರತೆ ಬೇಕು ಎಂದು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್ ಅವರ ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಕಳೆದ ಕೆಲವು ದಿನಗಳಿಂದ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಮೂಲ ಕಾರಣ, ಥಗ್ ಲೈಫ್ ಸಿನಿಮಾದ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಕಮಲ್ ಹಾಸನ್ ನೀಡಿದ ಹೇಳಿಕೆ. ಕನ್ನಡ ಭಾಷೆ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿದ್ದರು. ಇದಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು.
ಇದಾದ ಬಳಿಕ, ಕರ್ನಾಟಕದ ಹಲವರು ಹಾಗೂ ಪ್ರಾದೇಶಿಕ ಸಂಘಟನೆಗಳು ಕಮಲ್ ಹಾಸನ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸುತ್ತಿದ್ದು, ಇಲ್ಲವಾದರೆ ಚಿತ್ರದ ಬಿಡುಗಡೆ ತಡೆಗಟ್ಟಬೇಕು ಎಂದು ಸರ್ಕಾರ ಮತ್ತು ನ್ಯಾಯಾಂಗದತ್ತ ಮೊರೆ ಹೋದರು. ಈ ಬೆಳವಣಿಗೆ ಮಧ್ಯೆ ಕಮಲ್ ಹಾಸನ್ ಕ್ಷಮೆ ಕೇಳಲು ನಿರಾಕರಿಸಿದ್ದರು.
ಹೈಕೋರ್ಟ್ ಈಗಾಗಲೇ 10 ದಿನಗಳ ಕಾಲ ಥಗ್ ಲೈಫ್ ಬಿಡುಗಡೆಗೆ ತಾತ್ಕಾಲಿಕ ತಡೆ ನೀಡಿದ್ದು, ಚಿತ್ರಬೇರೆ ಯಾವುದೇ ಗಲಾಟೆಗಳಿಗೆ ಕಾರಣವಾಗಬಾರದೆಂಬ ದೃಷ್ಟಿಯಿಂದ ಇಂದು ಅಂತಿಮ ನಿರ್ಧಾರ ಹೊರಬೀಳಲಿದೆ. ಕಮಲ್ ಹಾಸನ್ ಕ್ಷಮೆ ಕೇಳುತ್ತಾರಾ? ಅಥವಾ ಚಿತ್ರಕ್ಕೆ ಇನ್ನಷ್ಟು ಕಾಲ ತಡೆ ಮುಂದುವರಿಯುತ್ತಾ? ಕನ್ನಡ ಚಿತ್ರ ಪ್ರೇಮಿಗಳು ಮತ್ತು ಅಭಿಮಾನಿಗಳು ಇಂದು ಕಾತುರದಿಂದ ನಿರೀಕ್ಷಿಸುತ್ತಿದ್ದಾರೆ.