ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಶಯದ ಪೆಡಂಭೂತಕ್ಕೆ ಸಿಲುಕಿದ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿಯ ತಲೆ ಬೋಳಿಸಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ ನಡೆದಿದೆ.
ಉಮೇಶ್ ಕೊಟ್ಟಲಗಿ ಎಂಬಾತನೇ ಈ ಕೃತ್ಯ ಎಸಗಿದ ಆರೋಪಿ. ತನ್ನ ಪತ್ನಿಯ ನಡತೆಯ ಮೇಲೆ ಸಂಶಯ ವ್ಯಕ್ತಪಡಿಸುತ್ತಿದ್ದ ಈತ, ಘಟನೆಯ ದಿನ ಮದ್ಯಪಾನ ಮಾಡಿ ಮನೆಗೆ ಬಂದಿದ್ದ ಎನ್ನಲಾಗಿದೆ.
ಇದನ್ನೂ ಓದಿ:
ಪತ್ನಿಗೆ ಕಬ್ಬು ಕಡಿಯುವ ಕೊಯ್ತ ತೋರಿಸಿ ಪ್ರಾಣ ಬೆದರಿಕೆ ಹಾಕಿದ್ದಲ್ಲದೆ, ಆಕೆಯ ಕೂದಲನ್ನು ಬೋಳಿಸಿ ರಾಕ್ಷಸನಂತೆ ವರ್ತಿಸಿದ್ದಾನೆ. ಪ್ರಸ್ತುತ ಸಾವಳಗಿ ಪೊಲೀಸರು ಆರೋಪಿಯನ್ನು ಬಂಧಿಸಿ ಕಠಿಣ ಕ್ರಮ ಕೈಗೊಂಡಿದ್ದಾರೆ.



