ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ದ್ವಾರಕಾ ಸೆಕ್ಟರ್ 13ರ ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಪಾಯದಿಂದ ಪಾರಾಗಲು ಬಾಲ್ಕನಿಯಿಂದ ಹಾರಿದ ಇಬ್ಬರು ಮಕ್ಕಳು ಹಾಗೂ ತಂದೆ ಸಾವನ್ನಪ್ಪಿದ್ದಾರೆ.
10 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಹಾಗೂ ತಂದೆ ಯಾದವ್ (35) ಮೃತ ದುರ್ದೈವಿಗಳು. ಏಕಾಏಕಿ ಭಾರೀ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪ್ರಾಣಾಪಾಯದಿಂದ ಪಾರಾಗುವ ಸಲುವಾಗಿ ಯಾದವ್ ತನ್ನ ಇಬ್ಬರು ಮಕ್ಕಳೊಂದಿಗೆ ಅಪಾರ್ಟ್ಮೆಂಟ್‌ನ 9ನೇ ಮಹಡಿಯ ಬಾಲ್ಕನಿಯಿಂದ ಕೆಳಗೆ ಹಾರಿದ್ದಾರೆ.
ಕೂಡಲೇ ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳನ್ನು ಆಕಾಶ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಅಷ್ಟು ಹೊತ್ತಿಗಾಗಲೇ ಅವರಿಬ್ಬರ ಪ್ರಾಣಪಕ್ಷಿ ಹಾರಿಹೋಗಿತ್ತು. ತಂದೆ ಯಾದವ್ ಐಜಿಐ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.