ಕೋರ್ಟ್‌ಗೆ ಕಾಲ್ತುಳಿತ ಪ್ರಕರಣದ ವಾಸ್ತವಾಂಶದ ಮಾಹಿತಿ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆರ್‌ಸಿಬಿ ವಿಜಯೋತ್ಸವ ಸಂದರ್ಭ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ, ಅಡ್ವೋಕೇಟ್ ಜನರಲ್ ಅವರೊಂದಿಗೆ ಚರ್ಚಿಸಿದ್ದಾರೆ. ವಾಸ್ತವಾಂಶ ಏನಿದೆ ಎಂಬುದನ್ನು ನ್ಯಾಯಾಲಯಕ್ಕೆ ತಿಳಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಂಗಳೂರಿನ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರದ ಗೃಹ ಇಲಾಖೆಗೆ ತನಿಖೆಯನ್ನು ಎನ್‌ಐಎಗೆ ವಹಿಸುವ ಅಧಿಕಾರವಿದ್ದು, ತನಿಖೆಗೆ ಎಲ್ಲ ಸಹಕಾರ ನೀಡಲಾಗುವುದು ಎಂದು ಹೇಳಿದರು. ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ ಎಂದು ತಿಳಿಸಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!