ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಸಮುದಾಯಗಳ ಅಂಕಿ ಅಂಶಗಳ ಬಗ್ಗೆ ಇರುವ ಗೊಂದಲ ನಿವಾರಣೆಗೆ ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನವದೆಹಲಿಯಲ್ಲಿ ಮಾತನಾಡಿದ ಅವರು, ಮನೆ ಮನೆ ಸಮೀಕ್ಷೆ ಹಾಗೂ ಆನ್ಲೈನ್ ಮೂಲಕ ಎಲ್ಲರೂ ತಮ್ಮ ಮಾಹಿತಿಯನ್ನು ಮತ್ತೊಮ್ಮೆ ಸಲ್ಲಿಸಲು ಅವಕಾಶ ನೀಡಲಾಗುವುದು. ಈ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು ಎಂದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರು ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಕರೆಸಿದ್ದಾರೆ. ಪಕ್ಷ ಸಂಘಟನೆ ವಿಚಾರವಾಗಿ, ರಾಜ್ಯ ರಾಜಕಾರಣ ಹಾಗೂ ಇತ್ತೀಚಿನ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚೆ ಮಾಡಲಾಯಿತು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!