‘ರಾಜ್ಯ ಸರ್ಕಾರ ಜಾತಿಗಣತಿ ಮರು ಸಮೀಕ್ಷೆಗೆ ಸೂಚನೆ ನೀಡಿರುವುದು ನಿಜಕ್ಕೂ ಸ್ವಾಗತಾರ್ಹ’

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗವು ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಪ್ರಾರಂಭವಾದಾಗಿನಿಂದಲೂ ಸಮೀಕ್ಷೆಯು ಸಮಗ್ರವಾಗಿಲ್ಲ, ವೈಜ್ಞಾನಿಕವಾಗಿಲ್ಲ ಹಾಗೂ ಪಾರದರ್ಶಕವಾಗಿಲ್ಲವೆಂದು ಆಧಾರಗಳ ಸಹಿತ ಅಖಿಲ ಭಾರತ ವೀರಶೈವ ಮಹಾಸಭೆಯು ಪ್ರತಿಭಟಿಸುತ್ತಲೇ ಬಂದಿರುತ್ತದೆ.

ಅಖಿಲ ಭಾರತ ವೀರಶೈವ ಮಹಾಸಭೆಯ ನಿರಂತರ ಹೋರಾಟದ ಫಲವಾಗಿ ಇಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರುಗಳಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು, ಶ್ರೀ ರಾಹುಲ್‌ ಗಾಂಧಿಯವರು, ಶ್ರೀ ಕೆ.ಸಿ. ವೇಣುಗೋಪಾಲ ರವರು ಹಾಗೂ ಇನ್ನಿತರೇ ಪಕ್ಷದ ಎಲ್ಲಾ ನಾಯಕರುಗಳು ರಾಜ್ಯದಲ್ಲಿ ಮರು ಸಮೀಕ್ಷೆ (ಜಾತಿಗಣತಿ) ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿರುವುದನ್ನು ಮಹಾಸಭೆಯು ಹೃತ್ತೂರ್ವಕವಾಗಿ ಸ್ವಾಗತಿಸುತ್ತದೆ.

ಈ ಹಿಂದೆ ಆಗಿರುವ ಲೋಪ-ದೋಷಗಳನ್ನು ಸರಿಪಡಿಸಿಕೊಂಡು ಎಲ್ಲರ ಸಹಕಾರದೊಂದಿಗೆ ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಸರ್ವರ ಒಳಿತಿಗಾಗಿ ಉತ್ತಮ ರೀತಿಯಲ್ಲಿ ರಾಜ್ಯ ಸರ್ಕಾರ ಗಣತಿಯನ್ನು ನಡೆಸಿದಲ್ಲಿ ಮಹಾಸಭೆಯ ಸಂಪೂರ್ಣ ಸಹಕಾರವಿರುತ್ತದೆಂದು ಮಹಾಸಭೆಯ ಅಧ್ಯಕ್ಷರಾದ ಮಾನ್ಯ ಡಾ. ಶಾಮನೂರು ಶಿವಶಂಕರಪ್ಪನವರು ಹಾಗೂ ಉಪಾಧ್ಯಕ್ಷರಾದ ಸಿದ್ಧರಾಮಪ್ಪ ಉಪ್ಪಿನ ತಿಳಿಸಿರುತ್ತಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!