ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ಗಾಯಕಿ ಮಂಗ್ಲಿ ಬರ್ತಡೇ ಪಾರ್ಟಿ ಮೇಲೆ ಚೆವೆಲ್ಲಾ ಠಾಣೆ ಪೊಲೀಸರು ದಾಳಿ ನಡೆಸಿ, ಮಾದಕ ವಸ್ತು ಸೇವಿಸಿದ್ದ ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಎರ್ಲಪಲ್ಲಿರುವ ತ್ರಿಪುರಾ ರೆಸಾರ್ಟ್ನಲ್ಲಿ ಬರ್ತಡೇ ಪಾರ್ಟಿ ನಡೆಯುತ್ತಿದ್ದ ವೇಳೆ ಗಾಂಜಾ, ವಿದೇಶಿ ಮದ್ಯ ಪತ್ತೆಯಾಗಿದೆ. ಪಾರ್ಟಿಯಲ್ಲಿ ಭಾಗಿಯಾಗಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೆಡಿಕಲ್ ಟೆಸ್ಟ್ನಲ್ಲಿ ಹಲವರು ಮಾದಕ ವಸ್ತು ಸೇವಿಸಿರೋದು ಬೆಳಕಿಗೆ ಬಂದಿದೆ.
ಈ ಸಂಬಂಧ ಚೆವೆಲ್ಲಾ ಪೊಲೀಸ್ ಠಾಣೆಯಲ್ಲಿ ಗಾಯಕಿ ವಿರುದ್ಧ ಪ್ರಕರಣ ದಾಖಲಾಗಿದೆ.