ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ವಿವಿದೆಡೆ ಭಾರೀ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 16ರವರೆಗೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ತಿಳಿಸಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಜೂನ್ 12ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.