ಪದಗಳಿಗೆ ಮೀರಿದ ಹೃದಯವಿದ್ರಾವಕ ಘಟನೆ: ವಿಮಾನ ಅಪಘಾತದ ಬಗ್ಗೆ ಮೋದಿ ತೀವ್ರ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏರ್ ಇಂಡಿಯಾ ವಿಮಾನ ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಈ ಅಪಘಾತವು “ಪದಗಳಿಗೆ ಮೀರಿದ ಹೃದಯವಿದ್ರಾವಕ” ಎಂದು ಹೇಳಿದ್ದಾರೆ.

“ಅಹಮದಾಬಾದ್‌ನಲ್ಲಿ ನಡೆದ ದುರಂತವು ನಮ್ಮನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕವಾಗಿದೆ. ಈ ದುಃಖದ ಸಮಯದಲ್ಲಿ, ಅದರಿಂದ ಬಾಧಿತರಾದ ಪ್ರತಿಯೊಬ್ಬರೊಂದಿಗೆ ನನ್ನ ಆಲೋಚನೆಗಳು ಇವೆ. ಪೀಡಿತರಿಗೆ ಸಹಾಯ ಮಾಡಲು ಕೆಲಸ ಮಾಡುತ್ತಿರುವ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೆನೇ” ಎಂದು X ನಲ್ಲಿ ಬರೆದಿದ್ದಾರೆ.

ಇಂದು ಮಧ್ಯಾಹ್ನ 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ವಿಮಾನವು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳ ನಂತರ ಅಹಮದಾಬಾದ್‌ನ ವಸತಿ ಪ್ರದೇಶದಲ್ಲಿ ಪತನಗೊಂಡಿತು. ಅನೇಕ ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!